







ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಕಾರ್ಯಾಗಾರ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶಿವಮೊಗ್ಗದಲ್ಲಿ ಭಾರತೀಯ ಆಹಾರ ನಿಗಮ (ಎಫ್‌ಸಿಐ)ದಲ್ಲಿ ಗುಣ ನಿಯಂತ್ರಣ ಸಹಾಯಕ ಅಧಿಕಾರಿಯಾದ ವಿನ್ಯಾಸ್ ಸೂಡ್ಲು ಅವರು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ಅವುಗಳ ತಯಾರಿ ವಿಧಾನ, ಅಧ್ಯಯನದ ಮಹತ್ವ ಹಾಗೂ ಭವಿಷ್ಯದ ಉದ್ಯೋಗಾವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಇದ್ದ ಸಂದೇಹಗಳನ್ನು ನಿವಾರಿಸಿಕೊಂಡರು. ಮುಖ್ಯ ಶಿಕ್ಷಕ ಸತೀಶ ಭಟ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.













