16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0

ಉಪ್ಪಿನಂಗಡಿ: ಕಳೆದ 16 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ತಮಿಳುನಾಡಿನ ತಿರುಣವೇಲಿ ನಿವಾಸಿ ಮಾಡ ಸ್ವಾಮಿ ಬಂಧಿತ ಆರೋಪಿ. ಈತನ ಮೇಲೆ ಉಪ್ಪಿನಂಗಡಿ ಪೊಲೀಸ್ಠಾಣೆಯಲ್ಲಿ ಅಕ್ರ 09/2005, ಕಲಂ 457,380 ಡಿ/ತಿ 34 ಐಪಿಸಿ ಸೆಕ್ಷನ್‌ನಡಿ ಪ್ರಕರಣ ದಾಖಲಾಗಿತ್ತು. ಆದರೆ ಕಳೆದ 16 ವರ್ಷದಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಉಪ್ಪಿನಂಗಡಿ ಪೊಲೀಸರು ಕೃಷ್ಣನಗರ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here