







ಪುತ್ತೂರು: ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರಿಗೆ ಜು.6ರಂದು ಸುಳ್ಯದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.


ಪರಿವಾರ ಕಾನದ ಕುರುಂಜಿ ಜಾನಕಿ ವೆಂಕಟ್ರಮಣ ಸಭಾ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು, ವಿವಿಧ ಕ್ಷೇತ್ರದ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸರ್ವಧರ್ಮಗಳ ಧಾರ್ಮಿಕ ಮುಖಂಡರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.



ಕಾರ್ಯಕ್ರಮದ ಯಶಸ್ಸಿಗೆ ಸುಳ್ಯದ ವಿವಿಧ ಕ್ಷೇತ್ರಗಳ ಪ್ರಮುಖರನ್ನೊಳಗೊಂಡ ಅಭಿನಂದನಾ ಸಮಿತಿಯನ್ನು ರಚಿಸಲಾಗಿದೆ. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ ನೇತೃತ್ವದಲ್ಲಿ ಸಮಾರಂಭ ಆಯೋಜಿಸಲಾಗಿದೆ










