






ಪುತ್ತೂರು: ಪುರಸಭೆ ವತಿಯಿಂದ ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ತ್ಯಾಜ್ಯ ನಿರ್ವಹಣೆ ಕುರಿತು ಕಾರ್ಯಗಾರ ನಡೆಯಿತು.


ಪ್ರಾರ್ಥನಾ ಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರು ನಗರಸಭೆ ಆಯುಕ್ತೆ ವಿದ್ಯಾ ಕಾಳೆ ಮಾತನಾಡಿ, ತ್ಯಾಜ್ಯ ನಿರ್ವಹಣೆಯ ಉದ್ದೇಶ, ಅಗತ್ಯತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಅದರ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಸಾಹಸ್ ಎನ್‌ಜಿಒ ಸಂಯೋಜಕ ಅನಂತ ದೇಶ ಭಂಡಾರಿ ಅವರು ಪವರ್‌ಪಾಯಿಂಟ್ ಪ್ರಸ್ತುತಿಯ ಮೂಲಕ ತ್ಯಾಜ್ಯ ವಿಂಗಡಣೆಯ ಮಹತ್ವ, ಮರುಬಳಕೆ, ಮರುಸಂಸ್ಕರಣೆ ಹಾಗೂ ಸ್ವಚ್ಛ ಪರಿಸರ ನಿರ್ಮಾಣದಲ್ಲಿ ಪ್ರತಿಯೊಬ್ಬರ ಪಾತ್ರದ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.



ತ್ಯಾಜ್ಯವನ್ನು ಹೇಗೆ ವಿಂಗಡಿಸಬೇಕು ಎಂಬುದರ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಲೋರಾ ಪಾಯ್ಸ್, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪುರಸಭೆ ಕಾರ್ಯಕರ್ತರು ಭಾಗವಹಿಸಿದ್ದರು. ಸಹಶಿಕ್ಷಕಿ ದೀಪ್ತಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ವಿದ್ಯಾರ್ಥಿಗಳು ಕಾರ್ಯಗಾರದ ಸಂಪೂರ್ಣ ಪ್ರಯೋಜನ ಪಡೆದರು.










