ಕಳಾರ ಬಸ್ ನಿಲ್ದಾಣ ಮತ್ತು ಚರಂಡಿ ಅವ್ಯವಸ್ಥೆ ಸರಿಪಡಿಸುವಂತೆ ಮನವಿ

0

ಕಡಬ: ಪರಿಸರ ಸಂರಕ್ಷಣಾ ಹೋರಾಟ ಸಮಿತಿ, ಕಳಾರ ವತಿಯಿಂದ ಕಳಾರ ಬಸ್ ನಿಲ್ದಾಣದ ಅವ್ಯವಸ್ಥೆ, ಚರಂಡಿ ಸಮಸ್ಯೆ ಹಾಗೂ ರಸ್ತೆ ಬದಿಯಲ್ಲಿ ಮಣ್ಣು ಎತ್ತಿ ಹಾಕಿರುವುದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಪಾದಚಾರಿಗಳು ಸುರಕ್ಷಿತವಾಗಿ ಸಂಚರಿಸಲು ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.


ಮನವಿಯಲ್ಲಿ, ಬಸ್ ನಿಲ್ದಾಣದ ಸುತ್ತಮುತ್ತಲಿನ ಅವ್ಯವಸ್ಥೆಯನ್ನು ತ್ವರಿತವಾಗಿ ನಿವಾರಿಸುವುದು, ಚರಂಡಿಯನ್ನು ಸ್ವಚ್ಛಗೊಳಿಸಿ ಸಮರ್ಪಕವಾಗಿ ನಿರ್ವಹಿಸುವುದು ಹಾಗೂ ರಸ್ತೆ ಬದಿಯಲ್ಲಿ ರಾಶಿಯಾಗಿ ಹಾಕಿರುವ ಮಣ್ಣನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.


ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣಾ ಹೋರಾಟ ಸಮಿತಿಯ ಉಪಾಧ್ಯಕ್ಷ ಇಸ್ಮಾಯಿಲ್ ಕೆ.ಎಚ್.ಗೌರವಾಧ್ಯಕ್ಷ ರಮ್ಲ ಸನ್‌ರೈಸ್, ಪ್ರಧಾನ ಕಾರ್ಯದರ್ಶಿ ಹಂಝ ಕೆ.ಎಚ್., ಸಾಮಾಜಿಕ ಕಾರ್ಯದರ್ಶಿ ಮಹಮ್ಮದ್ ಅಲಿ ಹಾರಿಸ್, ಸದಸ್ಯರಾದ ಅಬ್ದುಲ್ ನಬಿ ಶಾನ್, ಉಮೇಶ್ ಪೆಳತ್ತೋಡಿ ಹಾಗೂ ಜಬ್ಬಾರ್ ಕಳಾರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here