






ಇಚ್ಲಂಪಾಡಿ: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನ ಶಾಲಾ ಸಂಸತ್ನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ, ಮತದಾನದ ಮೂಲಕ ರಚಿಸಲಾಯಿತು.


ಶಾಲಾ ಮುಖ್ಯಮಂತ್ರಿಯಾಗಿ ಲತೇಶ್ ಮತ್ತು ಉಪ ಮುಖ್ಯಮಂತ್ರಿಯಾಗಿ ಅನುಷ ಆಯ್ಕೆಯಾದರು.ಶಾಲಾ ಮುಖ್ಯ ಶಿಕ್ಷಕ ಹೆಚ್. ಎಂ. ಗಿರೀಶ್ ಅವರ ನೇತೃತ್ವ ಹಾಗೂ ಶಿಕ್ಷಕ ವೃಂದದ ಮಾರ್ಗದರ್ಶನದಲ್ಲಿ ಇಡೀ ಚುನಾವಣಾ ಪ್ರಕ್ರಿಯೆ ನಡೆಯಿತು. ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಸತ್ತಿನ ಪದಾಧಿಕಾರಿಗಳಿಗೆ ಮುಖ್ಯ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಶುಭ ಹಾರೈಸಿದರು.













