ಕಾವು: ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ

0

ಕಾವು : ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ 30 ರಂದು ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಅಂಗವಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕಾರ್ಯಕ್ರಮದ ನೇರ ಪ್ರಸಾರವನ್ನು ಶಾಲೆಯಲ್ಲಿ ವೀಕ್ಷಿಸಲು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗೆ ಅವಕಾಶ ಕಲ್ಪಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಪುತ್ತೂರು ಡಿವೈಎಸ್ಪಿ ಪ್ರಮೋದ್ ಕುಮಾರ್, ಸಂಪ್ಯ ಪೊಲೀಸ್ ಠಾಣೆಯ ಗುಣಪಾಲ್ ಹಾಗೂ ಸಿಬ್ಬಂದಿಗಳಾದ ಸುರೇಶ್ ಕುಮಾರ್, ಮೌಲಾನ, ನಾಗರಾಜ್ ಮತ್ತು ಕಾರ್ತಿಕ್ ಭಾಗವಹಿಸಿದ್ದರು. ಅಲ್ಲದೆ ಶಾಲೆಯ ಅಕಾಡೆಮಿಕ್ ಕೋ-ಆರ್ಡಿನೇಟರ್ ಇಮ್ತಿಯಾಝ್ ಸಿ.ಎಂ. ಹಾಗೂ ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿವೈಎಸ್ಪಿ ಪ್ರಮೋದ್ ಕುಮಾರ್ ಅವರು ಮಾದಕ ದ್ರವ್ಯಗಳ ದುಷ್ಪರಿಣಾಮಗಳು, ಅವುಗಳಿಂದ ದೂರವಿರುವ ಅಗತ್ಯ ಹಾಗೂ ಆರೋಗ್ಯಕರ ಮತ್ತು ಜವಾಬ್ದಾರಿಯುತ ಜೀವನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು. ವಿದ್ಯಾರ್ಥಿಗಳು ಯಾವುದೇ ರೀತಿಯ ಮಾದಕ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಪ್ರಜೆಗಳಾಗಿ ಬೆಳೆಯಬೇಕು ಎಂದು ಕರೆ ನೀಡಿದರು.

ಶಾಲಾ ಆಡಳಿತ ನಿರ್ದೇಶಕರಾದ ಬದ್ರುದ್ದಿನ್ ಅವರು ಅತಿಥಿಗಳನ್ನು ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕಿ ದೀಪಿಕಾ ಚಾಕೋಟೆ ಅವರು ವಂದನಾರ್ಪಣೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಮಾದಕ ದ್ರವ್ಯ ವಿರೋಧಿ ಜಾಗೃತಿ ಮೂಡಿಸುವ ಪ್ರತಿಜ್ಞೆಯನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here