







ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಇವುಗಳ ಆಶ್ರಯದಲ್ಲಿ ಆಲಂಕಾರು ಭಾರತಿ ವಿದ್ಯಾಸಂಸ್ಥೆಯಲ್ಲಿ ಜೂ.30ರಂದು ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ಧರ್ಮಸ್ಥಳದಿಂದ ನಡೆದ ಜಾಗೃತಿ ಆನ್‌ಲೈನ್ ವೀಕ್ಷಣಾ ಕಾರ್ಯಕ್ರಮ ನಡೆಯಿತು.



ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಇಂದುಶೇಖರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ವಿದ್ಯಾರ್ಥಿಗಳು ಮಾದಕ ವಸ್ತುವಿನಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜನಜಾಗೃತಿ ವೇದಿಕೆ ಹಲವಾರು ವರ್ಷಗಳಿಂದ ಜಾಗೃತಿ ಮೂಡಿಸುವ ಕೆಲಸ ಮಾಡಿಕೊಂಡು ಬರುತ್ತಿದೆ” ಎಂದರು.



ಸಮಾರಂಭದ ಅಧ್ಯಕ್ಷತೆಯನ್ನು ಆಲಂಕಾರು ಭಾರತಿ ವಿದ್ಯಾಸಂಸ್ಥೆಯ ಸಂಚಾಲಕ ಗಂಗಾಧರ ಗೌಡ ವಹಿಸಿದ್ದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಆಶಾ ಎಸ್. ರೈ, ಪ್ರೌಢ ಶಾಲಾ ಶಿಕ್ಷಕಿ ಸ್ವಾತಿ ಉಪಸ್ಥಿತರಿದ್ದರು. ಆಲಂಕಾರು ವಲಯ ಮೇಲ್ವಿಚಾರಕಿ ಲತಾ ಸ್ವಾಗತಿಸಿ ವಂದಿಸಿದರು. ವಿದ್ಯಾ ಮತ್ತು ರಕ್ಷಕ್ ಸಹಕರಿಸಿದರು.










