






ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ದರ್ಬೆತ್ತಡ್ಕ ಶಾಲಾ ಬಳಿ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಜು.2ರಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲಹೊತ್ತು ವಾಹನ ಸಂಚಾರಕ್ಕೆ ತೊಂದರೆಯುಂಟಾಯಿತು. ಮರದ ಗೆಲ್ಲುಗಳು ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದಾದರೂ ವಿದ್ಯುತ್ ಕಂಬಗಳಿಗೆ ಯಾವುದೇ ಹಾನಿಯುಂಟಾಗಿಲ್ಲ ಎಂದು ತಿಳಿದು ಬಂದಿದೆ.



ಸ್ಥಳಕ್ಕೆ ಕುಂಬ್ರ ಮೆಸ್ಕಾಂ ಜೆಇ ರವೀಂದ್ರ, ಅರಣ್ಯ ಇಲಾಖೆಯ ದಿವೀಶ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.













