ಮುಂಡೂರು ಗ್ರಾ.ಪಂ ನೂತನ ಕಟ್ಟಡಕ್ಕೆ ಅನುದಾನ ಒದಗಿಸುವಂತೆ ಆಗ್ರಹಿಸಿ ಚಂದ್ರಶೇಖರ ಎನ್‌ಎಸ್‌ಡಿ ಅವರಿಂದ ಎಂಎಲ್ ಸಿ ಕಿಶೋರ್ ಬೊಟ್ಯಾಡಿಗೆ ಮನವಿ

0

ಪುತ್ತೂರು: ಮುಂಡೂರು ಗ್ರಾ.ಪಂ ನೂತನ ಕಟ್ಟಡಕ್ಕೆ ಅನುದಾನ ಒದಗಿಸುವಂತೆ ಆಗ್ರಹಿಸಿ ಮುಂಡೂರು ಗ್ರಾ.ಪಂ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಎನ್‌ಎಸ್‌ಡಿ ಅವರು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿಯವರಿಗೆ ಮನವಿ ಸಲ್ಲಿಸಿದ್ದಾರೆ.

ಈಗಿರುವ ಗ್ರಾ.ಪಂ ಕಟ್ಟಡದಲ್ಲಿ ಎಲ್ಲ ವ್ಯವಸ್ಥೆಗಳು ಇಲ್ಲದಿರುವುದು ಮತ್ತು ಇಕ್ಕಟ್ಟಿನಿಂದ ಕೂಡಿದ ಕಾರಣ ಗ್ರಾ.ಪಂ ನೂತನ ಕಟ್ಟಡ ನಿರ್ಮಾಣ ಮಾಡಬೇಕೆಂದು ತೀರ್ಮಾನಿಸಲಾಗಿತ್ತು, ಅದರಂತೆ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆಯನ್ನು ಪುತ್ತೂರು ಶಾಸಕರು ನೆರವೇರಿಸಿದ್ದರೂ ಅವರು ಅನುದಾನ ನೀಡಿಲ್ಲ, ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನದ ಅವಶ್ಯಕತೆ ಇರುವುದರಿಂದ ವಿಧಾನ ಪರಿಷತ್ ಸದಸ್ಯರಾದ ತಾವು ಅನುದಾನ ಒದಗಿಸಿಕೊಡುವ ಮೂಲಕ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಅವರು ಮನವಿಯಲ್ಲಿ ವಿನಂತಿಸಿದ್ದಾರೆ. ಮನವಿ ಸ್ವೀಕರಿಸಿದ ಎಂಎಲ್ಸಿ ಕಿಶೋರ್ ಬೊಟ್ಯಾಡಿ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here