ಮುಂದುವರಿದ ಮಳೆ-ಆರೆಂಜ್ ಅಲರ್ಟ್ ಘೋಷಣೆ-ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ಜು.3ರಂದೂ ರಜೆ

0

ಪುತ್ತೂರು:ದ.ಕ.ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿರುವುದರಿಂದ ಜು.3ರಂದೂ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಆದೇಶಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51(ಬಿ)ರ ಅನ್ವಯ ನಿಯಮಾನುಸಾರ ಕಾನೂನು ಕ್ರಮತೆಗೆದುಕೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here