







ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಜು. 12ರಂದು ಪುರುಷರಕಟ್ಟೆಯಲ್ಲಿರುವ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿರುವ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆಯು ಜು.3ರಂದು ಬಿಡುಗಡೆಗೊಂಡಿತು.


ಟ್ರಸ್ಟ್ ನ ಸದಸ್ಯ ಮೋನಪ್ಪ ಪುರುಷ ಮುಗೇರಡ್ಕ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಿದರು. ನರಿಮೊಗರು ಹಾಗೂ ಶಾಂತಿಗೋಡು ಗ್ರಾಮಗಳ ಎಲ್ಲಾ ಬೂತ್ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.













