







ಆಲಂಕಾರು: ತುಳು ಇಂಟರ್ ನ್ಯಾಷನಲ್ ಪುತ್ತೂರು ವಲಯ ಸಂಚಾಲಕರಾಗಿ ಪೆರಾಬೆ ಗ್ರಾಮದ ಮನವಳಿಕೆಗುತ್ತು ಮನೋಹರ ರೈ ಯವರು ಆಯ್ಕೆಯಾಗಿದ್ದಾರೆ.


ಮನೋಹರ ರೈ ಯವರು ಪ್ರಸ್ತುತ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಮಂಗಳೂರಲ್ಲಿ( ಹೆಚ್.ಪಿ.ಸಿ.ಎಲ್) ಸೇವೆ ಸಲ್ಲಿಸುತ್ತಿದ್ದು, ಸಾಮಾಜಿಕ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.



ತುಳುವ ಮಹಾಸಭೆಯ ಅಂತರರಾಷ್ಟ್ರೀಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕೇಂದ್ರೀಯ ಅಧ್ಯಕ್ಷ ಡಾ. ಅವಿನ್ ಬಿ. ಆರ್. ಆಳ್ವ, ಪ್ರಧಾನ ಕಾರ್ಯದರ್ಶಿ ಅರವಿಂದ ಬೆಳ್ಚಾಡ ಮತ್ತು ಪ್ರಧಾನ ಸಂಚಾಲಕ ವಿಶ್ವನಾಥ ಆಚಾರ್ಯ ಪೆರ್ಡೂರು ರವರು ನೇತೃತ್ವದಲ್ಲಿ ತುಳುವರ್ಲ್ಡ್ ಫೌಂಡೇಶನ್ನ ಗೌರವಾಧ್ಯಕ್ಷ ಶ್ರೀ ಹರಿನಾರಾಯಣ ದಾಸ ಅಸ್ರಣ್ಣ (ಕಟೀಲ್), ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ಕಾರ್ಯದರ್ಶಿ ವಸಂತ ರೈ ಹಾಗೂ ನಿರ್ದೇಶಕ ಡಾ. ರಾಜೇಶ್ ಕೃಷ್ಣ ಆಳ್ವವರವರ ಉಪಸ್ಥಿತಿಯಲ್ಲಿ ಕಟೀಲ್ ನಲ್ಲಿ ನಡೆದ ಸಭೆಯಲ್ಲಿ ಪುತ್ತೂರು ವಲಯ ಸಂಚಾಲಕರಾಗಿ ಮನೋಹರ ರೈ ಯವರನ್ನು ನೇಮಕಗೊಳಿಸಿದ್ದಾರೆ.
2028ರಲ್ಲಿ ಶತಮಾನೋತ್ಸವದ ಅಂಗವಾಗಿ ತುಳು ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆ, ತುಳುವ ನಾಗರಿಕತೆಯ ವೈಭವವನ್ನು ಮರುಸ್ಥಾಪಿಸುವುದು, ತುಳು ಭಾಷೆಗೆ ಸಂವಿಧಾನಾತ್ಮಕ ಮಾನ್ಯತೆ ದೊರಕಿಸುವ ಹೋರಾಟವನ್ನು ಬಲಪಡಿಸುವುದು ಹಾಗೂ ಪುತ್ತೂರು ವಲಯದಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಸಂಘಟನೆಯು ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.










