ದೇವಸ್ಥಾನದ ಆವರಣದಲ್ಲಿ ಅಕ್ರಮ ಮರಳು ಸಂಗ್ರಹ: ಕಡಬದಲ್ಲಿ ಪ್ರಕರಣ ದಾಖಲು

0

ಕಡಬ: ಚಾರ್ವಾಕ ಗ್ರಾಮದ ಕುಂಬ್ಲಾಡಿಯಲ್ಲಿರುವ ಶ್ರೀ ಕುಕ್ಕೆನಾಥ ಬಾಲ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಜೂನ್ 27ರಂದು ಬಂದ ಖಚಿತ ಮಾಹಿತಿಯ ಮೇರೆಗೆ ಕಡಬ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ದೇವಸ್ಥಾನದ ಆವರಣದಲ್ಲಿ ಸುಮಾರು ಒಂದು ಟಿಪ್ಪರ್ ಲೋಡ್‌ನಷ್ಟು ಮರಳು (ಅಂದಾಜು ಮೌಲ್ಯ ₹10,000) ಸಂಗ್ರಹಿಸಿರುವುದು ಪತ್ತೆಯಾಯಿತು.


ವಿಚಾರಣೆ ವೇಳೆ ದೇವಸ್ಥಾನದ ಅಧ್ಯಕ್ಷ ಗಣೇಶ್ ಅವರು ದೇವಸ್ಥಾನದ ದುರಸ್ತಿ ಕಾಮಗಾರಿಗಾಗಿ ಸಮೀಪದ ಕುಮಾರಧಾರ ನದಿಯಿಂದ ಯಾವುದೇ ಪರವಾನಿಗೆ ಪಡೆಯದೇ ಮರಳನ್ನು ಸಂಗ್ರಹಿಸಿರುವುದಾಗಿ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ಪಂಚರ ಸಮಕ್ಷಮ ಮಹಜರು ಮೂಲಕ ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 80/2026 ದಾಖಲಿಸಲಾಗಿದೆ. ಪ್ರಕರಣವನ್ನು MMCR-1994ರ ಕಲಂ 44, MMRD Act-1957ರ ಕಲಂ 4(1), 4(1A), 21(1)(A) ಹಾಗೂ BNS-2023ರ ಕಲಂ 303(2)ರ ಅಡಿಯಲ್ಲಿ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

LEAVE A REPLY

Please enter your comment!
Please enter your name here