ಡಿಜಿಟಲ್ ಅರೆಸ್ಟ್ ಪ್ರಕರಣ : ಸೈಬರ್ ವಂಚನೆಗೆ ಖಾತೆ ನೀಡುತ್ತಿದ್ದ ಜುಬೈರ್ ಬಂಧನ

0

ವಿಟ್ಲ: ಸೈಬರ್ ವಂಚನೆಗೆ ಸಾರ್ವಜನಿಕರ ಬ್ಯಾಂಕ್ ಖಾತೆಗಳನ್ನು ನೀಡಿ ಸಹಕರಿಸುತ್ತಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆ ಅ.ಕ್ರ. 104-2025 ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ಎಂಬಾತನನ್ನು ಜು.03ರಂದು ದಸ್ತಗಿರಿ ಮಾಡಲಾಗಿದೆ.

ಆರೋಪಿಯು ಡಿಜಿಟಲ್ ಅರೆಸ್ಟ್ ಪ್ರಕರಣದಲ್ಲಿ ಸೈಬರ್ ಅಪರಾಧಿಗಳಿಗೆ ಬ್ಯಾಂಕ್ ಖಾತೆಗಳನ್ನು ಪಡೆದು, ವಂಚನೆಯ ಹಣದ ವಹಿವಾಟಿಗೆ ಬಳಸಲು ನೀಡುತ್ತಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈತನ ವಿರುದ್ಧ U/S 66(C), 66(D) IT Act -2008 ಮತ್ತು ಕಲಂ: 126 (2), 308(6), 318(4), 319(2), 3(5) BNS ಅಡಿ ಪ್ರಕರಣ ದಾಖಲಾಗಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ. ವಿಚಾರಣೆ ವೇಳೆ ವಿಟ್ಲ ಪೊಲೀಸ್ ಠಾಣೆ ಅ.ಕ್ರ 180/2022 ಸೇರಿದಂತೆ ರಾಜ್ಯದ ವಿವಿಧ ಠಾಣೆಗಳಲ್ಲಿ ಈತನ ವಿರುದ್ಧ ಒಟ್ಟು 04 ಪ್ರಕರಣಗಳು ದಾಖಲಾಗಿರುವುದು ಗೊತ್ತಾಗಿದೆ. ಹಲವು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here