






ಪುತ್ತೂರು : ಶ್ರೀ ರಾಮಕೃಷ್ಣ ಪ್ರೌಢಶಾಲೆ, ಪುತ್ತೂರು ಇದರ2026-27ನೇ ಸಾಲಿನ ನೂತನ ರಕ್ಷಕ ಶಿಕ್ಷಕ ಸಂಘದ ರಚನೆಯು ಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಇವರ ಅಧ್ಯಕ್ಷತೆಯಲ್ಲಿ ಜೂ.27ರಂದು ಪುತ್ತೂರು ಎಂ ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು.


ಅಧ್ಯಕ್ಷರಾಗಿ ನಳಿನಾಕ್ಷಿ ನಾಯಕ್ ರವರು ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ವೀಣಾ ಸರಸ್ವತಿ, ಕಾರ್ಯದರ್ಶಿಯಾಗಿ ಅಕ್ಷತಾ ಭಂಡಾರ್ಕರ್, ಜತೆ ಕಾರ್ಯದರ್ಶಿಯಾಗಿ ರವಿ ಪೂಜಾರಿ ಹಾಗೂ ಕೋಶಾಧಿಕಾರಿಯಾಗಿ ತ್ರಿವೇಣಿ ರವರು ಆಯ್ಕೆಯಾದರು.
ಪ್ರಭಾರ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎಸ್ ಯವರು ಸ್ವಾಗತಿಸಿ, ಶಿಕ್ಷಕಿ ಅಶ್ವಿನಿ ಬಿ.ವಿ. ವಂದಿಸಿದರು. ಶಿಕ್ಷಕಿ ಸುಚಿತ್ರಾ ಕೆ ಯವರು ಕಾರ್ಯಕ್ರಮವನ್ನು ನಿರ್ವಹಿಸಿದರು.













