ಕೊಯಿಲ ಗ್ರಾ.ಪಂ.ನಿಂದ ಸ್ವಚ್ಛತಾ ಕಾರ್ಯಕ್ರಮ

0

ರಾಮಕುಂಜ: ಕೊಯಿಲ ಗ್ರಾ.ಪಂ.ವತಿಯಿಂದ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕೊಯಿಲ ಗ್ರಾ.ಪಂ.ವ್ಯಾಪ್ತಿಯಲ್ಲಿ ಜು.4ರಂದು ಸ್ವಚ್ಚತಾ ಕಾರ್ಯಕ್ರಮ ಮಾಡಲಾಯಿತು.


ಗ್ರಾ.ಪಂ.ಮಾಜಿ ಅಧ್ಯಕ್ಷರು, ಸದಸ್ಯರು, ಸ್ನೇಹ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಪ್ರತಿನಿಧಿಗಳು, ಆರೋಗ್ಯ ಸುರಕ್ಷಾಧಿಕಾರಿ, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು, ಆಶಾಕಾರ್ಯಕರ್ತೆಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಗ್ರಾ.ಪಂ.ಸಿಬ್ಬಂದಿಗಳು, ಗ್ರಾಮಸ್ಥರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಎಸ್.ಬಿ.ಎಂ ಜಿಲ್ಲಾ ನೋಡಲ್ ಅಧಿಕಾರಿಯವರೂ ಹಾಗೂ ದ.ಕ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಯವರು, ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರು, ಜಿ.ಪಂ.ನ ಎಸ್.ಬಿ.ಎಂ ಶಾಖೆಯ ಸಿಬ್ಬಂದಿಗಳು ಭೇಟಿ ನೀಡಿದರು.

LEAVE A REPLY

Please enter your comment!
Please enter your name here