






ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ-ಪುಷ್ಪಾ ಎಸ್.ರೈ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಕಾರ್ಯಕ್ರಮವು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಇದರ ವೇದಿಕೆ ನಿರ್ಮಾಣಕ್ಕೆ ಚಪ್ಪರ ಮುಹೂರ್ತ ಜು.೩ರಂದು ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಮೈದಾನದಲ್ಲಿ ನಡೆಯಿತು.
ಕೆ.ಸೇಸಪ್ಪ ರೈಯವರು ತೆಂಗಿನ ಕಾಯಿ ಒಡೆದು ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲಿ ಎಂದು ಪ್ರಾರ್ಥಿಸಿದರು. ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮುರಾರಿ ರಾವ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಸ್.ಆರ್.ಕೆ.ಲ್ಯಾಡರ್ಸ್ ನ ಮುಖ್ಯಸ್ಥ ಕೇಶವ ಕಲಾಯಿಗುತ್ತು, ಉಪ್ಪಿನಂಗಡಿ ಧನ್ವಂತರಿ ಆಸ್ಪತ್ರೆಯ ಡಾ.ಸುಪ್ರೀತಾ ರೈ, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಳೆನೇರೆಂಕಿ ಶಾಖಾ ವ್ಯವಸ್ಥಾಪಕ ಲೋಕನಾಥ ರೈ, ಗುರುರಾಜ್ ರೈ, ಪ್ರಶಾಂತ್ ರೈ, ಸುಬ್ರಹ್ಮಣ್ಯ ರಾವ್, ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಆನಂದ ಎಸ್.ಟಿ., ವ್ಯವಸ್ಥಾಪಕ ರಮೇಶ್ ರೈ, ಪ್ರೌಢಶಾಲಾ ವಿಭಾಗದ ಮುಖ್ಯಗುರು ಗಾಯತ್ರಿ ಯು.ಎನ್., ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಲೋಹಿತಾ ಎ., ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.












