ರಾಮಕುಂಜ ಗ್ರಾ.ಪಂ.ನಿಂದ ಸ್ವಚ್ಛತಾ ಕಾರ್ಯಕ್ರಮ

0

ರಾಮಕುಂಜ: ಕಡಬ ತಾಲೂಕಿನ ರಾಮಕುಂಜ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿಯಲ್ಲಿ ಸ್ವಚ್ಚತಾ ಕಾರ್ಯಕ್ರಮ ಜು.4ರಂದು ನಡೆಯಿತು.
ಸಂಜೀವಿನಿ ಒಕ್ಕೂಟ, ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಸಿಬ್ಬಂದಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿಯವರು ಮತ್ತು ಕಡಬ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಯವರು ಭೇಟಿ ನೀಡಿದರು.

LEAVE A REPLY

Please enter your comment!
Please enter your name here