







ಪುತ್ತೂರು :ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ನಿವಾಸದಲ್ಲೇ SIR (Special Intensive Revision) ಪ್ರಕ್ರಿಯೆಯಡಿ ಸ್ವತಃ ತಮ್ಮ ಅರ್ಜಿಯನ್ನು ಭರ್ತಿ ಮಾಡುವ ಮೂಲಕ ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಹಕರಿಸಿದರು.



ಈ ಸಂದರ್ಭದಲ್ಲಿ ಸಂಬಂಧಿತ ಚುನಾವಣಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು, ಅರ್ಜಿ ಭರ್ತಿ ಪ್ರಕ್ರಿಯೆಗೆ ಅಗತ್ಯ ಮಾರ್ಗದರ್ಶನ ನೀಡಿದರು.



ಈ ವೇಳೆ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ ಅವರು, “ಪ್ರಜಾಪ್ರಭುತ್ವದ ಬಲಿಷ್ಠ ಅಡಿಪಾಯವೇ ಮತದಾರರ ಪಟ್ಟಿ. ಪ್ರತಿಯೊಬ್ಬ ಅರ್ಹ ಮತದಾರರು SIR ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಮ್ಮ ವಿವರಗಳನ್ನು ಸರಿಪಡಿಸಿ ಹಾಗೂ ನವೀಕರಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ತಮ್ಮ ಮತದಾನದ ಹಕ್ಕನ್ನು ಭದ್ರಪಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.










