ಮಾಯ್ ದೆ ದೇವುಸ್ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

0

ಪುತ್ತೂರು: ಮಂಗಳೂರು ಎಂಸಿಸಿ ಬ್ಯಾಂಕ್ ವತಿಯಿಂದ ಮಾಯ್ ದೆ ದೇವುಸ್ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ ಜು.4ರಂದು ಮಾಯ್ ದೆ ದೇವುಸ್ ಶಾಲೆಯಲ್ಲಿ ನಡೆಯಿತು. ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ|ಡಾ|ಜಾನ್ ಬ್ಯಾಪ್ಟಿಸ್ಟ್ ಸಲ್ಡಾನ್ಹಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಿ, ಶುಭ ಹಾರೈಸಿದರು.

ವಿದ್ಯಾರ್ಥಿಗಳ ಪರವಾಗಿ ಕು. ಹಾರ್ವಿ ಕೃತಜ್ಞತಾ ಸಮರ್ಪಣೆ ಮಾಡಿದರು. ಪುತ್ತೂರು ಎಂಸಿಸಿ ಬ್ಯಾಂಕ್ ನಿರ್ದೇಶಕರಾದ ಜೆ.ಪಿ. ರೊಡ್ರಿಗಸ್, ಪ್ರಭಾರ ಶಾಖಾ ವ್ಯವಸ್ಥಾಪಕ ಮೇರಿಯನ್ ಡಿಕುನ್ಹಾ ಉಪಸ್ಥಿತರಿದ್ದರು. ನಿರ್ದೇಶಕರಾದ ಜೆ.ಪಿ.ರೊಡ್ರಿಗಸ್ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಜಾನೆಟ್ ಡಿಸೋಜ ವಂದಿಸಿದರು. ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here