ಕಲ್ಪಡ ಸ್ನೇಹಿತರ ಬಳಗದ ದಶಮ ಸಂಭ್ರಮ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮ

0

ಕಾಣಿಯೂರು: ಕಲ್ಪಡ ಕೊಡಿಯಾಲ ಸ್ನೇಹಿತರ ಬಳಗದ ದಶಮ ವರ್ಷದ ಸಂಭ್ರಮದ ಅಂಗವಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮೂವಪ್ಪೆ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಿತು.


ಕಾರ್ಯಕ್ರಮವನ್ನು ನಿವೃತ್ತ ಅರಣ್ಯ ಇಲಾಖೆಯ ಅಧಿಕಾರಿ ಕುಶಾಲಪ್ಪ ಗೌಡ ಕಲ್ಪಡ ಅವರು ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಂಡು ಮರಗಳನ್ನು ನೆಟ್ಟು ಬೆಳೆಸುವ ಜವಾಬ್ದಾರಿಯನ್ನು ಅರಿಯಬೇಕು ಎಂದರು.


ಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ಸುರೇಶ್ ಗುತ್ತು, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಯುವರಾಜ್ ಕೆ., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿರುದ್ಧಿ ಯೋಜನೆ ಕೊಡಿಯಾಲ (ಬಿ ) ಒಕ್ಕೂಟದ ಸೇವಾ ಪ್ರತಿನಿಧಿ ಹರಿಣಿ ಕೆ., ಕಾರ್ಯಕ್ರಮದ ಮಾರ್ಗದರ್ಶಕರಾಗಿ ತಾರನಾಥ ಗುತ್ತು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರು,ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು , ಬಳಗದ ಪದಾಧಿಕಾರಿಗಳು,ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದ ಸುತ್ತಮುತ್ತ ಹಣ್ಣಿನ ಗಿಡಗಳು ಸೇರಿದಂತೆ ವಿವಿಧ ಜಾತಿಯ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು.

LEAVE A REPLY

Please enter your comment!
Please enter your name here