ಕಡಬ: ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚಿಸಲು ಯತ್ನ-ಪ್ರಕರಣ ದಾಖಲು

0

ಕಡಬ: ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚಿಸಲು ಯತ್ನಿಸುವ ಉದ್ದೇಶಹೊಂದಿದ್ದ ಆರೋಪದಲ್ಲಿ ಉಪ್ಪಿನಂಗಡಿ ನಿವಾಸಿ ಮಹಮ್ಮದ್ ಫಾಯಿಝ್ (20ವ.) ಹಾಗೂ ಬಂಟ್ವಾಳ ಕಸಬಾ ನಿವಾಸಿ ಮೊಹಮ್ಮದ್ ಮುರ್ಷೀದ್ (45ವ.) ಎಂಬವರ ವಿರುದ್ಧ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಇವರು ಜು.3ರಂದು ಸಂಜೆ ಕಡಬ ಪೇಟೆಯಲ್ಲಿ ಸಂಶಯಾಸ್ಪದವಾಗಿ ವರ್ತಿಸುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಕಡಬ ಪೊಲೀಸರು ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ಅವರುಗಳು ಬ್ಯಾಂಕ್‌ನಲ್ಲಿ ಸುಮಾರು 120 ಗ್ರಾಂ.ಚಿನ್ನವನ್ನು ಅಡವಿಡಲು ಬಂದಿರುವುದಾಗಿ ತಿಳಿಸಿದ್ದರು. ಅವರ ವರ್ತನೆಯಿಂದ ಸಂಶಯಗೊಂಡು ಠಾಣೆಗೆ ಕರೆತಂದು ಹೆಚ್ಚಿನ ವಿಚಾರಣೆ ನಡೆಸಿದಾಗ ಅವರ ಬಳಿಯಿರುವ ಆಭರಣದ ಬಗ್ಗೆ ಯಾವುದೇ ದಾಖಲಾತಿಯನ್ನು ತೋರಿಸದೇ ಸಮಂಜಸ ಮಾಹಿತಿ ನೀಡದಿದ್ದು, ಸದ್ರಿ ಆಭರಣಗಳನ್ನು ಹೆಚ್ಚು ತೂಕ ಬರುವಂತೆ ಮಾಡಿ ಬ್ಯಾಂಕ್‌ನಲ್ಲಿ ಅಡವಿಟ್ಟು ಬ್ಯಾಂಕ್‌ನವರಿಗೆ ಮೋಸ ಮಾಡಿ ಹಣ ಮಾಡುವ ಉದ್ದೇಶದಿಂದ ಬಂದಿರುವುದಾಗಿ ತಿಳಿಸಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕಡಬ ಪೊಲೀಸರು ಅ.ಕ್ರ: 83/2026, ಕಲಂ: 318(4), 62 BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

========================================

LEAVE A REPLY

Please enter your comment!
Please enter your name here