






ಪುತ್ತೂರು: ಭಾರೀ ಗಾಳಿ ಮತ್ತು ಮಳೆಯಿಂದಾಗಿ ಮರವೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ಕೆಯ್ಯೂರು ದೇವಸ್ಥಾನದ ದ್ವಾರದ ಬಳಿ ಜು.7ರಂದು ಮಧ್ಯಾಹ್ನ ನಡೆದಿದೆ.



ಮರವು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ತಡೆ ಉಂಟಾಗಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಮರ ತೆರವುಗೊಳಿಸಿದರು.













