






ಪುತ್ತೂರು: ಉರ್ಲಾಂಡಿ ಪ್ರದೇಶದಲ್ಲಿ ಮಳೆ ನೀರು ರಸ್ತೆಯಲ್ಲೇ ಹರಿದು ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ನೀರಿನ ಜೊತೆಗೆ ಕೆಸರು ರಸ್ತೆಯ ಮೇಲೆ ಸಂಗ್ರಹಗೊಂಡು ದ್ವಿಚಕ್ರ ವಾಹನ ಸವಾರರು ಜಾರಿ ಬೀಳುವ ಸ್ಥಿತಿ ನಿರ್ಮಾಣವಾಗಿದೆ. ಪಾದಚಾರಿಗಳಿಗೂ ಓಡಾಡಲು ಕಷ್ಟವಾಗುತ್ತಿದೆ. ಈ ಕುರಿತು ಹಲವು ಬಾರಿ ನಗರಸಭೆಗೆ ದೂರು ನೀಡಿದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಸೂಕ್ತ ಕ್ರಮ ಕೈಗೊಂಡು ಚರಂಡಿ ವ್ಯವಸ್ಥೆ ಸರಿಪಡಿಸಬೇಕು ಎಂದು ಅವರು ನಗರಸಭೆಯನ್ನು ಒತ್ತಾಯಿಸಿದ್ದಾರೆ.













