ಭಾರೀ ಗಾಳಿಗೆ ಮೈಂದನಡ್ಕ-ಬಡಗನ್ನೂರು ಭಾಗದಲ್ಲಿ ರಸ್ತೆಗೆ ಉರುಳಿ ಬಿದ್ದ ಮರಗಳು

0

ಪುತ್ತೂರು : ಮೈಂದನಡ್ಕ-ಬಡಗನ್ನೂರು ಭಾಗದಲ್ಲಿ ಭಾರೀ ಗಾಳಿ ಮತ್ತು ಮಳೆಯಿಂದ ಬೃಹತ್ ಗಾತ್ರದ ಮರ ಸೇರಿದಂತೆ ಹಲವು ಮರಗಳು ರಸ್ತೆ ಮೇಲೆ ಉರುಳಿ ಬಿದ್ದ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ನಡೆದಿದೆ.

ಮರಗಳು ವಿದ್ಯುತ್ ಕಂಬಗಳ ಮೇಲೂ ಬಿದ್ದ ಪರಿಣಾಮ ಹಲವು ಕಡೆ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ಸಂಪರ್ಕವೂ ವ್ಯತ್ಯಯಗೊಂಡಿದೆ. ಮರ ಬಿದ್ದ ಪರಿಣಾಮ ಕೆಲಕಾಲ ರಸ್ತೆ ಬಂದ್ ಆಗಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಬಳಿಕ ಇಲಾಖೆ ಮತ್ತು ಸಾರ್ವಜನಿಕ ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

LEAVE A REPLY

Please enter your comment!
Please enter your name here