ಕೆಯ್ಯೂರು: ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ

0

ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್ ವತಿಯಿಂದ 2026-2027ನೇ ಸಾಲಿನ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯನ್ನು ಜು.8ರಂದು ಕೆಯ್ಯೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ಪುತ್ತೂರು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾಶ್ರೀ ಶೆಣೈ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಜಯಲಕ್ಷ್ಮಿ ಅವರು ಸಾಮಾಜಿಕ ಪರಿಶೋಧನೆಯ ಮಹತ್ವ ಹಾಗೂ ಉದ್ದೇಶದ ಬಗ್ಗೆ ವಿವರವಾದ ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಕಾರ್ತಿಕ್ ಎ ಅವರು ಕೇಂದ್ರ 15ನೇ ಹಣಕಾಸು ಯೋಜನೆ ಮತ್ತು ರಾಜ್ಯ ಹಣಕಾಸು ಯೋಜನೆಯ ವರದಿಯನ್ನು ಹಾಗೂ ಚಂಚಲ ಕುಮಾರಿ ಬಿ ಅವರು ಎಂ.ಎನ್.ಆರ್.ಇ.ಜಿ.ಎ ಯೋಜನೆಯ ವರದಿಯನ್ನು ಸಭೆಯಲ್ಲಿ ವಾಚಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಮಿತಾ ಎ.ಕೆ ಅವರು ಸ್ವಾಗತಿಸಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.ಸಭೆಯಲ್ಲಿ ಎಂ.ಎನ್.ಆರ್.ಇ.ಜಿ.ಎ ಫಲಾನುಭವಿಗಳು, ಮಾಜಿ ಸದಸ್ಯ ಜಯಂತ ಕೆ, ಪಂಚಾಯತ್ ಸಿಬ್ಬಂದಿ, ದುರ್ಗಾಂಬಿಕಾ ಸಂಜೀವಿನಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here