






ಬಡಗನ್ನೂರು : ಪುತ್ತೂರು ಮಾತೃ ಸಂಸ್ಥೆ ದ್ವಾರಕಾ ಪ್ರತಿಷ್ಠಾನ (ರಿ.) ವತಿಯಿಂದ ನಡೆಸಲ್ಪಡುವ ಪಟ್ಟೆ ಶೀ ಕೃಷ್ಣ ವಿದ್ಯಾಸಂಸ್ಥೆಗಳ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭವು ಜು. 9 ರಂದು ನಡೆಯಲಿದೆ.


ಜು. 9 ರಂದು ಬೆಳಗ್ಗೆ ಗಂ 7 ರಿಂದ ಶ್ರೀ ಮಹಾಗಣಪತಿ ಹವನ, 8.30 ರಿಂದ ನೂತನ ಶಾಲಾ ಕಟ್ಟಡದ ಉದ್ಘಾಟನಾ ಕಾರ್ಯಕ್ರನು ನಡೆಯಲಿರುವುದು.ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್ ನೂತನ ಶಾಲಾ ಕಟ್ಟಡದ ಉದ್ಘಾಟನೆ ಮಾಡಿ ಬಳಿಕ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಉಪಸ್ಥಿತರಾಗಿ, ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಉಪಾಧ್ಯಕ್ಷ ಅಮೃತಕೃಷ್ಣ ಎನ್. ಪುತ್ತೂರು ದ್ವಾರಕಾ ಪ್ರತಿಷ್ಠಾನ (ರಿ.) ಕಾರ್ಯದರ್ಶಿ ಗಣರಾಜ ಕುಂಬ್ಳೆ,ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕ ವಿಪ್ಪೇಶ್ ಹಿರಣ್ಯ, ಪ್ರತಿಭಾ ಪ್ರೌಢ ಶಾಲಾ ಎಸ್. ಡಿ. ಯಂ. ಸಿ ಅಧ್ಯಕ್ಷ ಲಿಂಗಪ್ಪ ಗೌಡ ಮೂಡಿಕೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಎಸ್. ಡಿ. ಯಂ. ಸಿ ಅಧ್ಯಕ್ಷ ಕೇಶವಪ್ರಸಾದ್ ನೀಲಗಿರಿ, ಶ್ರೀಕೃಷ್ಣ ಆಂಗ್ಲಮಾಧ್ಯಮ ಶಾಲಾ ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ಸತೀಶ್ ಕೊಪ್ಪಳ, ಪ್ರತಿಭಾ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಸುಮನ ಬಿ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ ಎನ್. ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾವತಿ ಡಿ ಭಾಗವಹಿಸಲಿದ್ದಾರೆ.



ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ದಿ ಸಮಿತಿ ಸದಸ್ಯರು, ಮಕ್ಕಳ ಪೋಷಕರು, ಶಿಕ್ಷಣಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶೀ ಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.










