







ಉಪ್ಪಿನಂಗಡಿ: ಗುರುವಾಯನಕೆರೆ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿರುವ ಘನ ಗಾತ್ರದ ಮಣ್ಣು ಸಾಗಾಟದ ಲಾರಿಗಳನ್ನು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬರುತ್ತಿರುವ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯಲ್ಲಿ ಈ ಲಾರಿಗಳನ್ನು ತಡೆದು ನಿಲ್ಲಿಸಿ ಪೊಲೀಸರು ದಂಡ ವಿಧಿಸಿದ್ದಾರೆ.


ಈ ಲಾರಿಗಳ ಸಂಚಾರದಿಂದ ಈಗಾಗಲೇ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯಲ್ಲಿ ಗುಂಡಿ ಬಿದ್ದಿದ್ದು, ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯ ಸೇತುವೆಗೂ ಧಕ್ಕೆ ಬಂದಿದೆ. ಜು.9ರಂದು ರಾತ್ರಿ ಕಲ್ಲೇರಿ ಬಳಿ ಚಾಲಕರು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಲಾರಿಯನ್ನು ಚಾಲನೆ ಮಾಡಿಕೊಂಡು ಬಂದಿದ್ದು, ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಪಾದಚಾರಿಗಳಿಗೆ ಕೆಸರು ನೀರಿನ ಸಿಂಪಡಣೆಯಾಗಿತ್ತು. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣವೇ ಕಾರ್ಯಪ್ರವೃತರಾದ ಪೊಲೀಸರು ಲಾರಿಗಳನ್ನು ಉಪ್ಪಿನಂಗಡಿಯಲ್ಲಿ ತಡೆದು ನಿಲ್ಲಿಸಿ ದಂಡ ವಿಽಸಿದರಲ್ಲದೆ, ಲಾರಿ ಚಾಲಕರಿಗೆ ಎಚ್ಚರಿಕೆ ನೀಡಿದರು.













