ಪುರುಷರಕಟ್ಟೆ ಪ್ರಕರಣ: ಇಂದು(ಜು.10) ಯುವತಿ ಮನೆಗೆ ಬಿಜೆಪಿ ನಾಯಕರ ಭೇಟಿ- ಜು.13 : ರಾಜ್ಯಪಾಲರಿಗೆ ಮನವಿ ಸಲ್ಲಿಕೆ

0

ಪುತ್ತೂರು, ಜು.10: ಪುರುಷರಕಟ್ಟೆ ಪ್ರಕರಣದ ಯುವತಿಯ ಮನೆಗೆ ಭಾರತೀಯ ಜನತಾ ಪಾರ್ಟಿಯ ನಾಯಕರ ತಂಡ ಇಂದು ಭೇಟಿ ನೀಡಲಿದೆ.

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದ ಜಿಲ್ಲಾ ಪದಾಧಿಕಾರಿಗಳ ತಂಡ ಇಂದು ಸಂಜೆ 5.00 ಗಂಟೆಗೆ ಯುವತಿಯ ಮನೆಗೆ ತೆರಳಲಿದೆ.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹಾಗೂ ಪಕ್ಷದ ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದು, ಯುವತಿಯ ಕುಟುಂಬವನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯಪಾಲರಿಗೆ ಮನವಿ
ಪುರುಷರಕಟ್ಟೆ ಘಟನೆ ಸಂಬಂಧ ದೂರು ನೀಡಲು ಠಾಣೆಗೆ ತೆರಳಿದ್ದ ಯುವತಿಯ ಮೇಲೆಯೇ ಪೊಲೀಸರು ಪ್ರಕರಣ ದಾಖಲಿಸಿರುವುದು ಮತ್ತು ಪ್ರಕರಣದಲ್ಲಿ ಯುವತಿಯ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವನ್ನು ಗೃಹ ಇಲಾಖೆ ನಡೆಸುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜು.13ರಂದು ಬೆಳಿಗ್ಗೆ 11.00 ಗಂಟೆಗೆ ಎಸಿ ಕಚೇರಿ ಮುಂಭಾಗದಲ್ಲಿ ರಾಜ್ಯಪಾಲರಿಗೆ ಸಲ್ಲಿಸುವ ಮನವಿಯನ್ನು ಎಸಿ ಮೂಲಕ ಸಲ್ಲಿಸಲಾಗುವುದು ಎಂದು ಬಿಜೆಪಿ ಪ್ರಮುಖರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here