ಪುತ್ತೂರು: 41 ಬಾರಿ ವಾರೆಂಟ್ ಆದೇಶವಾಗಿದ್ದ ಆರೋಪಿ ಕೇರಳದ ತ್ರಿಶೂರ್‌ನಲ್ಲಿ ಬಂಧನ

0

ಪುತ್ತೂರು: 9 ವರ್ಷಗಳ ಹಿಂದೆ ಕೆದಿಲದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬರಿಗೆ 41 ಬಾರಿ ವಾರಂಟ್ ಜಾರಿಯಾಗಿದ್ದು ಇದೀಗ ಪುತ್ತೂರು ಪೊಲೀಸರು ಕೇರಳದ ತ್ರಿಶೂರ್‌ನಲ್ಲಿ ಬಂಧಿಸಿದ್ದಾರೆ.


ಕೇರಳದ ತ್ರಿಶೂರ್ ನಿವಾಸಿ ನೆಲ್ಸನ್ ಸಿ.ವಿ (38ವ)ರವರು ಬಂಧಿತ ಆರೋಪಿ. 2017ರ ಡಿ.22ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಕೆದಿಲ ಮನೆಯೊಂದರಲ್ಲಿ ಮೂರು ಜನ ಅಪರಿಚಿತ ವ್ಯಕ್ತಿಗಳು ನುಗ್ಗಿ ಮನೆಯಲ್ಲಿದ್ದವರಿಗೆ ಪಿಸ್ತೂಲ್ ಮತ್ತು ಚೂರಿಯನ್ನು ತೋರಿಸಿ ಸುಮಾರು ರೂ 2,88,೦೦೦ ಅಂದಾಜು ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ರೂ 6೦,೦೦೦೦ ನಗದು ಹಣವನ್ನು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ರಿ ಪ್ರಕರಣದಲ್ಲಿ ಆರೋಪಿಯಾದ ಕೇರಳ ತ್ರಿಶೂರ್ ನಿವಾಸಿ ನೆಲ್ಸನ್ ಸಿ.ವಿ (38ವ) ಎಂಬವರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ದ 41 ಬಾರಿ ಈತನ ವಿರುದ್ಧ ದಸ್ತಗಿರಿ ವಾರೆಂಟ್ ಆದೇಶವಾಗಿತ್ತು. ಜು.8ರಂದು ಪುತ್ತೂರು ನಗರ ಪೊಲೀಸ್ ಠಾಣಾ ಠಾಣಾ ಹೆಡ್‌ಕಾನ್‌ಸ್ಟೇಬಲ್ ಸಂತೋಷ್ ಎ, ಕಾನ್‌ಸ್ಟೇಬಲ್ ವಿನಾಯಕ, ಮತ್ತು ಶಿವರಾಜ್ ಅವರು ಕೇರಳ ರಾಜ್ಯದ ತ್ರಿಶೂರು ಜಿಲ್ಲೆಯ ಮಿಯೂರು ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯು ಷರತ್ತುಬದ್ದ ಜಾಮೀನು ಮುಚ್ಚಳಿಕೆಯನ್ನು ಪಡೆದುಕೊಂಡು ಆ ಬಳಿಕ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ನ್ಯಾಯಾಲಯದ ಷರತ್ತಿನ ಆದೇಶವನ್ನು ಪದೇ ಪದೇ ಉಲ್ಲಂಘಿಸಿರುವುದರಿಂದ ಈತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ: 269  NS  2023 ರಂತೆ ಪ್ರಕರಣ ದಾಖಲಾಗಿರುತ್ತದೆ.

LEAVE A REPLY

Please enter your comment!
Please enter your name here