ವಿಟ್ಲ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಮೃತ್ಯು

0

ವಿಟ್ಲ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಜು.11ರಂದು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ‌.
ಬಂಟ್ವಾಳ ತಾಲೂಕು ಬೋಳಂತೂರು ದಂಡೆಮಾರ್‌ ನಿವಾಸಿ ಅಬ್ದುನ್ನಾಸಿರ್ (ನಾಸಿರ್ ದಂಡೆಮಾರ್‌) ಮೃತದುರ್ದೈವಿ.

ಜು.4ರಂದು ನಾಸಿರ್ ರವರು ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಇವರು ಸಂಚರಿಸುತ್ತಿದ್ದ ದ್ವಿಚಕ್ರವಾಹನ ಹಾಗೂ ಆಟೋ ರಿಕ್ಷಾದ ಮಧ್ಯೆ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ಬೈಕ್‌ ಸವಾರ ನಾಸಿ‌ರ್ ಅವರ ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ ಎಂದು‌ ಮಾಹಿತಿ ಲಭಿಸಿದೆ.

LEAVE A REPLY

Please enter your comment!
Please enter your name here