







ನಿಡ್ಪಳ್ಳಿ; ಪಾಣಾಜೆ ಗ್ರಾಮದ ತೂಂಬಡ್ಕ ದಿವಂಗತ ಬಟ್ಯ ಪೂಜಾರಿ ಯವರ ಧರ್ಮಪತ್ನಿ ಕಮಲ (87 ವ) ರವರು ಅಲ್ಪ ಕಾಲದ ಅನಾರೋಗ್ಯದಿಂದ ಜು.12ರಂದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.



ಮೃತರು ಪಾಣಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣ ಪೂಜಾರಿ ತೂಂಬಡ್ಕ ಸಹಿತ ಆರು ಮಂದಿ ಪುತ್ರರು ಹಾಗೂ ನಾಲ್ವರು ಪುತ್ರಿಯರು ಮತ್ತು ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.












