







ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಚಿತ್ರಕಲೆ ಹಾಗೂ ವಿನ್ಯಾಸ ತರಬೇತಿ ಕಾರ್ಯಕ್ರಮ ನಡೆಯಿತು.



ಒಟ್ಟು 25 ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದರು. ತರಬೇತಿ ಕಾರ್ಯಕ್ರಮದಲ್ಲಿ ಚೇತನ್ ಅವರು Basic Drawing, ಚೈತ್ರ ಅವರು Painting and Colour Theory, ಸುಶಾಂತ್ ಅವರು Basic Sculpture, ಚಿಂತನ್ ಅವರು UI/UX Design, ವಿಧೀಷಾ ಅವರು Digital Art and Logo Design, ಕವಿತಾ ಹಾಗೂ ಜೇಶ್ಮಾ ಅವರು Fashion Design ಮತ್ತು ಚರಣ್ ಅವರು Software and Social Media ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡಿದರು.



ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಸತೀಶ್ ಭಟ್ ಅವರು ತರಬೇತುದಾರರಾದ ಚೇತನ್ ಅವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ವಿವಿಧ ಕಲಾ ಹಾಗೂ ವಿನ್ಯಾಸ ಕ್ಷೇತ್ರಗಳ ಮೂಲಭೂತ ಕೌಶಲ್ಯಗಳನ್ನು ಕಲಿತುಕೊಂಡರು. ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.









