






ಪುತ್ತೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ನಡೆಸುವ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಹನ ಮಳಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ. ಇವರು ಪುತ್ತೂರು ತಾಲೂಕಿನ ಮಡ್ನೂರಿನ ವೆಂಕಟಕೃಷ್ಣ ಎಮ್.ಎನ್ ಹಾಗೂ ವೀಣಾ ಸರಸ್ವತಿ ದಂಪತಿಗಳ ಪುತ್ರಿ.



ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.












