ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕಿನಿಂದ ರೂ.5 ಲಕ್ಷ ಸಹಾಯಧನ ಚೆಕ್ ಹಸ್ತಾಂತರ

0

ಪುತ್ತೂರು: ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುಳ್ಯಪದವು ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಘೋಷಿಸಲಾಗಿದ್ದ ರೂ.5ಲಕ್ಷ ಸಹಾಯಧನವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಂಘಕ್ಕೆ ಹಸ್ತಾಂತರಿಸಲಾಯಿತು.

ಜು.2ರಂದು ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೇಂದ್ರ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಸಹಾಯಧನದ ಚೆಕ್ಕನ್ನು ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಬಿ.ಆರ್. ಅವರಿಗೆ ವಿತರಿಸಿದರು.


ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸೂರ್ಯನಾರಾಯಣ ಭಟ್ ಬಿ., ನಿರ್ದೇಶಕರಾದ ಅಮರನಾಥ ರೈ, ರಾಜೀವಿ ಎಸ್. ರೈ, ಶಿವರಾಮ ಬಿ., ಮಲ್ಲಿಕಾ ಎ.ಜೆ., ಸಂತೋಷ್ ಆಳ್ವ, ಶ್ರೀನಿವಾಸ್ ಪ್ರಸಾದ್ ಎಂ., ನೂತನ ಕಟ್ಟಡದ ಇಂಜಿನಿಯರ್ ಹರಿಪ್ರಸಾದ್ ರೈ, ನಾರಾಯಣ ಕುಕ್ಕುಪುಣಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಿಬ್ಬಂದಿ ಉದಯಶಂಕರ್ ಕೆ.ಪಿ. ಪ್ರಾರ್ಥಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಬಿ.ಆರ್. ಸ್ವಾಗತಿಸಿದರು. ನಿರ್ದೇಶಕಿ ರಾಜೀವಿ ಎಸ್. ರೈ ವಂದಿಸಿದರು. ರಾಜ್ ಪ್ರಕಾಶ್ ರೈ ಕಾರ್ಯಕ್ರಮ ನಿರೂಪಿಸಿದರು. ಸಹಕಾರಿ ಸಂಘದ ಅಭಿವೃದ್ಧಿ ಹಾಗೂ ಮೂಲಸೌಕರ್ಯ ವೃದ್ಧಿಗೆ ಈ ಸಹಾಯಧನ ಮಹತ್ವದ ಕೊಡುಗೆಯಾಗಲಿದೆ ಎಂದು ಸಂಘದ ಪದಾಧಿಕಾರಿಗಳು ಅಭಿಪ್ರಾಯಪಟ್ಟರು.

LEAVE A REPLY

Please enter your comment!
Please enter your name here