ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ)ದಲ್ಲಿ ವಿಶ್ವ ಜನಸಂಖ್ಯಾ ದಿನ ಆಚರಣೆ

0

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಇದರ ಮಾನವಿಕ ವಿಭಾಗದ ವತಿಯಿಂದ ವಿಶ್ವ ಜನಸಂಖ್ಯಾ ದಿನ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆಂಟನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳು ವಿಶ್ವದ ಜನಸಂಖ್ಯೆಯ ಸ್ಥಿತಿಗತಿಗಳನ್ನು ವಿಶ್ಲೇಷಿಸಿ, ಸರಳ ಜೀವನವನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ವಾಸುದೇವ ಎನ್. ಮಾತನಾಡಿ ಜನಸಂಖ್ಯೆಯ ನಿರಂತರ ಹೆಚ್ಚಳದಿಂದ ವಿಶ್ವ ಎದುರಿಸುತ್ತಿರುವ ಸವಾಲುಗಳು, ಸಂಪನ್ಮೂಲಗಳ ಮೇಲಿನ ಒತ್ತಡ ಹಾಗೂ ಸುಸ್ಥಿರ ಅಭಿವೃದ್ಧಿಯ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಕ್ಯಾಪ್ಟನ್ ಜಾನ್ಸನ್ ಡೇವಿಡ್ ಸಿಕ್ವೇರಾ ಉಪಸ್ಥಿತರಿದ್ದರು. ತೃತೀಯ ಬಿ.ಎ. ವಿದ್ಯಾರ್ಥಿನಿ ಫಾತಿಮತ್ ರಿಫಾ ಸ್ವಾಗತಿಸಿದರು. ತೃತೀಯ ಬಿ.ಎ. ವಿದ್ಯಾರ್ಥಿ ಅವಿನಾಶ್ ವಂದಿಸಿದರು. ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹರ್ಷಿತಾ ಪಿ.ವಿ. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here