ಉಪ್ಪಿನಂಗಡಿ: ಕಾಂಚನ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

0

ಉಪ್ಪಿನಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧೀನಕ್ಕೊಳಪಟ್ಟ ಕಾಂಚನದ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಶಿವರಾಮ ಕಾರಂತ ಉರಾಬೆ ಮಾತನಾಡಿ, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಾಗಿದೆ ಎಂದರು.


ಯಕ್ಷಗಾನ ತರಬೇತುದಾರ ಅರುಣ್ ಕುಮಾರ್ ಮಾತನಾಡಿ, ಯಕ್ಷಗಾನ ಜೀವನದ ಕಲೆ ಅಲ್ಲದೇ ಅದೊಂದು ಮೌಲ್ಯವಾಗಿದೆ. ಅದನ್ನು ಉಳಿಸಿ ಬೆಳೆಸಬೇಕು ಎಂದರು.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಮಧುಶ್ರೀ ಮಾತನಾಡಿ, ಶಾಲೆಯು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ಇನ್ನೂ ಹೆಚ್ಚು ಅಭಿವೃದ್ಧಿಯನ್ನು ಹೊಂದಲಿ ಎಂದು ಶುಭ ಹಾರೈಸಿದರು.


ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯಗುರು ಎ. ಲಕ್ಷ್ಮಣ ಗೌಡ ಮಾತನಾಡಿ, ಶಿಕ್ಷಣದ ಜೊತೆಗೆ ಯಕ್ಷಗಾನ, ಸಂಗೀತ, ನೃತ್ಯ, ಚಿತ್ರಕಲೆ ಮುಂತಾದ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಅವಶ್ಯಕ ಎಂದು ಹೇಳಿದರು.


ವೇದಿಕೆಯಲ್ಲಿ ಚಿತ್ರಕಲಾ ಶಿಕ್ಷಕ ಮಾಯಿಲಪ್ಪ, ನೃತ್ಯ ಶಿಕ್ಷಕಿ ಕುಮಾರಿ ಪೂಜಾ, ಸಂಗೀತ ಶಿಕ್ಷಕಿ ಶ್ರೀಮತಿ ಪ್ರತಿಭಾ, ಹಿರಿಯ ಶಿಕ್ಷಕ ರಾಜಶೇಖರಪ್ಪ ಉಪಸ್ಥಿತರಿದ್ದರು.
ಸಹ ಶಿಕ್ಷಕಿಯರಾದ ರಮ್ಯಶ್ರೀ ಸ್ವಾಗತಿಸಿದರು. ವಂದನಾ ವಂದಿಸಿದರು. ಪವಿತ್ರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here