ರಾಜ್ಯದಲ್ಲಿ ಎಸ್‌ಐಆರ್ ಪರಿಷ್ಕರಣೆ ವೇಳಾಪಟ್ಟಿ ಪರಿಷ್ಕರಣೆ

0

ಪುತ್ತೂರು: ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ ಪರಿಷ್ಕರಿಸಿದೆ. ಪರಿಷ್ಕೃತ ವೇಳಾಪಟ್ಟಿಯಂತೆ ಬೂತ್ ಮಟ್ಟದ ಅಧಿಕಾರಿ(ಬಿಎಲ್‌ಒ)ಗಳ ಮನೆ-ಮನೆ ಭೇಟಿ ಕಾರ್ಯ ಆ.8ರವರೆಗೆ ಮುಂದುವರಿಯಲಿದ್ದು, ಕರಡು ಮತದಾರರ ಪಟ್ಟಿಯನ್ನು ಆ.17ರಂದು ಪ್ರಕಟಿಸಲಾಗುತ್ತದೆ. ಅಂತಿಮ ಮತದಾರರ ಪಟ್ಟಿ ಅ19ರಂದು ಪ್ರಕಟವಾಗಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿದೆ.

ಹಿಂದಿನ ವೇಳಾಪಟ್ಟಿಯಂತೆ ಜೂ.30 ರಿಂದ ಜು.29ರ ವರೆಗೆ ಬಿಎಲ್‌ಓಗಳ ಮನೆ ಮನೆ ಭೇಟಿ, ಆ.5ಕ್ಕೆ ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ನಾಗರಿಕರಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಿ ಆ.5ರಿಂದ ಸೆ.4ರ ವರೆಗೆ ಅವಕಾಶ ಹಾಗೂ ಅಂತಿಮವಾಗಿ ಅ.7ರಂದು ಪರಿಷ್ಕೃತ ಮತದಾರರ ಅಂತಿಮ ಪಟ್ಟಿ ಪ್ರಕಟಗೊಳ್ಳಲಿತ್ತು.

ಇದೀಗ ಚುನಾವಣಾ ಆಯೋಗದ ಜು.15ರ ಹೊಸ ಆದೇಶದಂತೆ, ಅ.1ನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಎಸ್‌ಐಆರ್ ಪ್ರಕ್ರಿಯೆಯನ್ನು ಮುಂದುವರಿಸಲಾಗುತ್ತಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಜೂ.30ರಿಂದ ಪ್ರಾರಂಭಗೊಂಡಿರುವ ಬೂತ್ ಮಟ್ಟದ ಅಧಿಕಾರಿಗಳ(ಬಿಎಲ್‌ಒ) ಮನೆ-ಮನೆ ಭೇಟಿ ಕಾರ್ಯವು ಆ.8ರವರೆಗೆ ಮುಂದುವರಿಯಲಿದೆ. ಇದೇ ಅವಧಿಯಲ್ಲಿ ಮತಗಟ್ಟೆಗಳ ಮರುಜೋಡಣೆ ಹಾಗೂ ಮರುಹಂಚಿಕೆ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಲಾಗುತ್ತದೆ.

ಕರಡು ಮತದಾರರ ಪಟ್ಟಿಯನ್ನು ಆ.17ರಂದು ಪ್ರಕಟಿಸಲಾಗುತ್ತದೆ. ಆ.17ರಿಂದ ಸೆ.16ರವರೆಗೆ ಮತದಾರರ ಹಕ್ಕು-ದಾವೆ ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಲ್ಲಿಕೆಯಾಗುವ ಅರ್ಜಿಗಳ ಪರಿಶೀಲನೆ ಮತ್ತು ವಿಲೇವಾರಿ ಪ್ರಕ್ರಿಯೆ ಆ.17ರಿಂದ ಅ.15ರವರೆಗೆ ನಡೆಯಲಿದೆ. ಬಳಿಕ ಅ.19ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಪರಿಸ್ಕೃತ ವೇಳಾಪಟ್ಟಿಯಲ್ಲಿ ಚುನಾವಣಾ ಆಯೋಗವು ತಿಳಿಸಿದೆ.

LEAVE A REPLY

Please enter your comment!
Please enter your name here