ಸಂತ ಫಿಲೋಮಿನ ಪ್ರೌಢಶಾಲೆಯಲ್ಲಿ ತಾ|ಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ

0

ಪುತ್ತೂರು: 2026-27ನೇ ಶೈಕ್ಷಣಿಕ ವರ್ಷದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ ಸಂತ ಫಿಲೋಮಿನ ಅನುದಾನಿತ ಪ್ರೌಢಶಾಲೆಯಲ್ಲಿ ನಡೆಯಿತು.


ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ಸುರೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಸಂತ ಫಿಲೋಮಿನ ಅನುದಾನಿತ ಪ್ರೌಢಶಾಲೆ ಮುಖ್ಯಗುರು ವಂ|ಮ್ಯಾಕ್ಸಿಮ್ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿದ್ದ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್ ಮಾತನಾಡಿ ಕ್ರೀಡಾಕೂಟದ ನಿಯಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸಿಲ್ವಿಯಾ ಆರ್. ಕ್ಯಾಸ್ಟಲಿನೊ ಕ್ರೀಡಾಕೂಟದ ಮಾಹಿತಿ ನೀಡಿ 2026-27 ಸಾಲಿನ ಕ್ರೀಡಾಕೂಟದ ಹಂಚಿಕೆ, ಪಂದ್ಯಾಟಗಳ ಸಂದರ್ಭದಲ್ಲಿನ ಸಮಸ್ಯೆಗಳು ಮತ್ತು ವಿವಿಧ ನಿಯಮಗಳ ಬಗ್ಗೆ ತಿಳಿಸಿದರು. ಈ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟದ ನೇತೃತ್ವ ವಹಿಸಲಿರುವ ಸಂತ ಫಿಲೋಮಿನಾ ಪ್ರೌಢಶಾಲೆ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ಸ್ವಾಗತಿಸಲಾಯಿತು.

ಕ್ಷೇತ್ರ ಸಮನ್ವಯ ಅಧಿಕಾರಿ ನವೀನ್ ಸ್ಟೀಫನ್ ವೇಗಸ್, ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕರುಣಾಕರ ಮಣಿಯಾಣಿ, ಪುತ್ತೂರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಮಲ್ಲಾರ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕಡಬ ತಾಲೂಕು ಅಧ್ಯಕ್ಷ ಮಮಾಚ್ಚನ್, ಕರ್ನಾಟಕ ರಾಜ್ಯ ಸರಕಾರಿ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ರಹಾಂ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಪುತ್ತೂರು ತಾಲೂಕು ಅಧ್ಯಕ್ಷ ಕೃಷ್ಣಯ್ಯ ಕೆ., ರಾಜ್ಯ ಸರಕಾರಿ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಪುತ್ತೂರು ತಾಲೂಕು ಅಧ್ಯಕ್ಷ ಬಾಲಕೃಷ್ಣ, ಪುತ್ತೂರು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶಶಿಕಲ ಮತ್ತು ತಾಲೂಕಿನ ECO, BRP, BIERT, ಎಲ್ಲಾ ವಲಯಗಳ ಸಿಆರ್‌ಪಿ.ಗಳು, ನೋಡಲ್ ಅಧಿಕಾರಿಗಳು, ವಿವಿಧ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು, ಮುಖ್ಯಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕಿ ಮೋಲಿ ಫೆರ್ನಾಂಡಿಸ್ ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ನರೇಶ್ ಲೋಬೊ ಸ್ವಾಗತಿಸಿ, ಶಿಕ್ಷಕಿ ಕಾರ್ಮಿನ್ ಪಾಯಸ್ ವಂದಿಸಿದರು. ಕುಂಬ್ರ ಕೆಪಿಎಸ್ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ನೂತನ ಕ್ಷೇತ್ರ ಶಿಕ್ಷಣಾಧಿಕಾರಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯವರಿಗೆ ಗೌರವಾರ್ಪಣೆ
ಪುತ್ತೂರು ತಾಲೂಕಿಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಆಗಮಿಸಿದ ಡಿ. ಸುರೇಶ್, ನೂತನ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್, ನೂತನ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸಿಲ್ವಿಯಾ ಆರ್. ಕ್ಯಾಸ್ಟಾಲಿನೊ ಹಾಗೂ ನಿಕಟಪೂರ್ವ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಚಕ್ರಪಾಣಿ ಎ.ವಿ.ರವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮತ್ತು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಸ್ವಾಗತಿಸಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here