






ಪುತ್ತೂರು: ಪುತ್ತೂರಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಕ್ಷಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್, ಅಕ್ಷಯ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ತನ್ನ ಶೈಕ್ಷಣಿಕ ಸೇವೆಯನ್ನು ಇದೀಗ ಚಿಕ್ಕಮಗಳೂರಿಗೂ ವಿಸ್ತರಿಸಿದ್ದು, ಅಕ್ಷಯ ಕರಿಯರ್ ಅಕಾಡೆಮಿಯನ್ನು ಆರಂಭಿಸಿದೆ.


ಪುತ್ತೂರಿನಲ್ಲಿ ಪದವಿ ಹಾಗೂ ಪದವಿಪೂರ್ವ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ವೃತ್ತಿಪರ ಮತ್ತು ಉದ್ಯೋಗಾಧಾರಿತ ಶಿಕ್ಷಣ ನೀಡುತ್ತಿರುವ ಅಕ್ಷಯ ಸಮೂಹ ಸಂಸ್ಥೆಯು, ಚಿಕ್ಕಮಗಳೂರು ಹಾಗೂ ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೂ ವೃತ್ತಿಪರ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಈ ಹೊಸ ಶಾಖೆಯನ್ನು ಆರಂಭಿಸಿದೆ.




ಚಿಕ್ಕಮಗಳೂರಿನ ಅಕ್ಷಯ ಕರಿಯರ್ ಅಕಾಡೆಮಿಯಲ್ಲಿ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್, ಫ್ಯಾಷನ್ ಡಿಸೈನಿಂಗ್ ಮತ್ತು ಮಾಡೆಲಿಂಗ್, ಲಾಜಿಸ್ಟಿಕ್ಸ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಹಾಗೂ ಬಿಸಿನೆಸ್, ಅಕೌಂಟಿಂಗ್ ಮತ್ತು ಟ್ಯಾಕ್ಸೇಶನ್ ಸೇರಿದಂತೆ ಆರು ತಿಂಗಳು ಹಾಗೂ ಒಂದು ವರ್ಷದ ವಿವಿಧ ವೃತ್ತಿಪರ ಕೋರ್ಸ್‌ಗಳನ್ನು ಆರಂಭಿಸಲಾಗಿದೆ. ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಈ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದಾಗಿದೆ.
ವಿದ್ಯಾರ್ಥಿಗಳಿಗೆ ತರಗತಿ ಶಿಕ್ಷಣದ ಜೊತೆಗೆ ಪ್ರಾಯೋಗಿಕ ತರಬೇತಿ, ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯ ಹಾಗೂ ಸಂದರ್ಶನ ತರಬೇತಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳನ್ನು ಉದ್ಯೋಗ ಕ್ಷೇತ್ರಕ್ಕೆ ಸಜ್ಜುಗೊಳಿಸುವ ಉದ್ದೇಶದೊಂದಿಗೆ ಶೇ.100ರಷ್ಟು ಉದ್ಯೋಗಾವಕಾಶ ಕಲ್ಪಿಸುವ ಗುರಿಯನ್ನು ಸಂಸ್ಥೆ ಹೊಂದಿದ್ದು, ಕೋರ್ಸ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆಯಲು ಅಗತ್ಯ ಮಾರ್ಗದರ್ಶನ ಮತ್ತು ಸಹಕಾರ ನೀಡಲಾಗುತ್ತದೆ.
ಪುತ್ತೂರಿನಲ್ಲಿ ಆರಂಭಗೊಂಡ ಅಕ್ಷಯ ಸಮೂಹ ಸಂಸ್ಥೆಯ ಶೈಕ್ಷಣಿಕ ಸೇವೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಚಿಕ್ಕಮಗಳೂರಿನಲ್ಲಿ ಅಕ್ಷಯ ಕರಿಯರ್ ಅಕಾಡೆಮಿಯನ್ನು ಆರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ವೃತ್ತಿಪರ ಹಾಗೂ ಉದ್ಯೋಗಾಧಾರಿತ ಶಿಕ್ಷಣವನ್ನು ತಲುಪಿಸುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಉದ್ಘಾಟನೆ..
ವಿಸ್ತರಿತ ಸಂಸ್ಥೆಯ ಉದ್ಘಾಟನೆಯನ್ನು ವಿಧಾನಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡರವರು ನೆರವೇರಿಸಿ ಶುಭ ಹಾರೈಸಿದರು. ಗೌರವಾನ್ವಿತ ಅತಿಥಿಗಳಾಗಿ ಚಿಕ್ಕಮಗಳೂರು ಶಾಸಕ ಎಚ್. ಡಿ. ತಮ್ಮಯ್ಯ, ಶ್ರೀಮತಿ ಪಲ್ಲವಿ ಸಿ. ಟಿ. ರವಿ, ಚಿಕ್ಕಮಗಳೂರು ಬಿಲ್ಲವ ಸಮಾಜ ಸಂಘದ ಅಧ್ಯಕ್ಷ ಕೆ. ರಾಜು, ಎಂ.ಜಿ ಟವರ್ ಮಾಲಕ ವಿಜಯ್ ಕುಮಾರ್, ವಿಶೇಷ ಆಹ್ವಾನಿತರಾದ ನಳಂದ ಶಿಕ್ಷಣ ಸಂಸ್ಥೆಗಳ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಮಲ್ಲಿಕಾರ್ಜುನ್ ಎಸ್.,ಎಂ.ಇ.ಎಸ್ ಪಿಯು ಕಾಲೇಜು ಪ್ರಾಂಶುಪಾಲ ಗೋಪಾಲ್ ರಾವ್, ಅಕ್ಷಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಅಧ್ಯಕ್ಷ ಜಯಂತ್ ನಡುಬೈಲು, ಮಂಗಳೂರು ಕೆರಿಯರ್ ಡೆಸ್ಟಿನಿ ಸಂಸ್ಥಾಪಕಿ ಶ್ರೀಮತಿ ಜಯಶ್ರೀ, ಪ್ರಾಂಶುಪಾಲರು, ಸಿಇಒ ಹಾಗೂ ಚಿಕ್ಕಮಗಳೂರು ಅಕ್ಷಯ ಕೆರಿಯರ್ ಅಕಾಡೆಮಿಯ ಶ್ರೀಮತಿ ಮಂಜುಶ್ರಿ, ಅಕ್ಷಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಕಲಾವತಿ ಜಯಂತ್, ಪ್ರಾಂಶುಪಾಲ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಶೈಕ್ಷಣಿಕ ನಿರ್ದೇಶಕ ಅಭಿಲಾಷ್ ಕ್ಷತ್ರೀಯ ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 7899452338 | 7338676611 | 8088381678










