






ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಿಗಾಗಿ ಹೆಚ್‌ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.



ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ ಅವರು ಹೆಚ್‌ಪಿವಿ ವೈರಸ್, ಗರ್ಭಕಂಠದ ಕ್ಯಾನ್ಸರ್, ಅದರ ಲಕ್ಷಣಗಳು, ತಡೆಗಟ್ಟುವ ಕ್ರಮಗಳು ಹಾಗೂ ಹೆಚ್‌ಪಿವಿ ಲಸಿಕೆಯ ಮಹತ್ವದ ಬಗ್ಗೆ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು. ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಜಲಜ ಅವರು ಆರೋಗ್ಯ ರಕ್ಷಣೆ ಹಾಗೂ ವೈಯಕ್ತಿಕ ಸ್ವಚ್ಛತೆಯ ಕುರಿತು ಉಪಯುಕ್ತ ಮಾಹಿತಿಯನ್ನು ಹಂಚಿಕೊಂಡರು.



ಈ ಸಂದರ್ಭದಲ್ಲಿ ವಿಜ್ಞಾನ ಶಿಕ್ಷಕಿ ಉಷಾ ಅವರು ಡಾ. ಮಂಜುನಾಥ ಅವರಿಗೆ, ಪ್ರಫುಲ್ಲ ಅವರು ರಕ್ಷಾಧಿಕಾರಿ ಜಲಜ ಅವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಹಿಂದಿ ಶಿಕ್ಷಕಿ ಪುಷ್ಪ ಅವರು ನಿರೂಪಿಸಿದರು. ವಿಜ್ಞಾನ ಶಿಕ್ಷಕಿ ಉಷಾ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.









