






ವಿಟ್ಲ: ಸಾಮಾಜಿಕ ಜಾಲತಾಣಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಅವಹೇಳನಕಾರಿ ಮತ್ತು ನಿಂದನಾತ್ಮಕ ಪೋಸ್ಟ್ಗಳನ್ನು ಹರಡಿರುವ ಆರೋಪದ ಮೇಲೆ ಮಹೇಶ್ ವಿಕ್ರಂ ಹೆಗಡೆ ಎಂಬವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಲಾಗಿದೆ.


ವಿಟ್ಲ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ವಿಟ್ಲ ಬ್ಲಾಕ್ ಸಾಮಾಜಿಕ ಜಾಲತಾಣ ಸಮಿತಿಯ ಪದಾಧಿಕಾರಿಗಳು ಜಂಟಿಯಾಗಿ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗರವರನ್ನು ಭೇಟಿಯಾಗಿ ದೂರು ನೀಡಿ, ಶಾಸಕರ ತೇಜೋವಧೆ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.




ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣ ಗುತ್ತು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಎಸ್. ಮಹಮ್ಮದ್, ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಗಳಾದ ಪ್ರವೀಣ್ ಚಂದ್ರ ಆಳ್ವ ,ರಮಾನಾಥ ವಿಟ್ಲ, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ್ ಶೆಟ್ಟಿ ಕೊಲ್ಯ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ದಿನಕರ ಆಳ್ವ, ಬ್ಲಾಕ್ ಎಸ್.ಟಿ. ಘಟಕದ ಅಧ್ಯಕ್ಷರಾದ ಮಹಾಲಿಂಗ ನಾಯ್ಕ, ಬ್ಲಾಕ್ ಹಿಂದುಳಿದ ಘಟಕದ ಅಧ್ಯಕ್ಷರಾದ ಮೋಹನ್ ಗುರ್ಜಿನಡ್ಕ, ಅಕ್ರಮ-ಸಕ್ರಮ ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ವಿ. ಅಬ್ದುಲ್ ರಹಿಮಾನ್, ನಾಮನಿರ್ದೇಶಿತ ಸದಸ್ಯರಾದ ಇಕ್ಬಾಲ್ ಹೊನೆಸ್ಟ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ವಿ. ಕೆ. ಎಂ. ಹಂಝ, ಗ್ಯಾರಂಟಿ ಸಮಿತಿ ಸದಸ್ಯ ಅಬ್ಬು ನವಗ್ರಾಮ ಪಕ್ಷದ ಪ್ರಮುಖರಾದ ಶೈಕ್ ಅಲಿ ಸೆರಾಜೆ, ಚೇತನ್, ಶಂಶಿರ್ ನೆಲ್ಲಿಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು.










