ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಆಯುಕ್ತೆ ಫೌಜಿಯಾ ತರನ್ನುಮ್ ಪುತ್ತೂರು ಉಪವಿಭಾಗ ಕಛೇರಿಗೆ ಭೇಟಿ

0

ಪುತ್ತೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರಾದ ಫೌಜಿಯಾ ತರನ್ನುಮ್ ಬಿ. ಜು.17ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪುತ್ತೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪವಿಭಾಗ ಕಛೇರಿಗೆ ಭೇಟಿ ನೀಡಿದರು. ಗ್ರಾಮೀಣ ನೀರು ಸರಬರಾಜು ಉಪವಿಭಾಗದ ಸೂಕ್ಷ್ಮಜೀವಶಾಸ್ತ್ರ ಪ್ರಯೋಗಾಲಯ ವೀಕ್ಷಣೆ ಮಾಡಿ ಶೀಘ್ರವಾಗಿ ಕಾರ್ಯಾರಂಭಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದರು.

ಇಲಾಖೆಯ ಅಧಿಕಾರಿ, ಸಿಬಂದಿಗಳು ಆಯುಕ್ತರನ್ನು ಸ್ವಾಗತಿಸಿದರು. ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರವಾಡೆ ವಿನಾಯಕ ಕಭಾರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸುರೇಶ್, ಕಾರ್ಯನಿರ್ವಾಹಕ ಇಂಜಿನಿಯರ್ ಪಿ. ಜಯಪ್ರಕಾಶ್ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here