






ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಗ್ರಾಮಸಭೆಯಲ್ಲಿ ವಿಶಿಷ್ಟ ಸಾಧಕರನ್ನು ಗುರುತಿಸಿ ಗೌರವಿಸುವ ’ ಗೌರವ ಗ್ರಾಮ ಸಭಾ ಪುರಸ್ಕಾರ’ ಕ್ಕೆ ಪತ್ರಕರ್ತ ಮತ್ತು ರಂಗ ನಿರ್ದೇಶಕ ಮೌನೇಶ್ ವಿಶ್ವಕರ್ಮ ಅವರು ಆಯ್ಕೆಯಾಗಿದ್ದಾರೆ.


ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ ಮೌನೇಶ್ ಅವರು, ಕಳೆದ ಹಲವು ವರ್ಷಗಳಿಂದ ಮಕ್ಕಳ ರಂಗಭೂಮಿ ಕ್ಷೇತ್ರದಲ್ಲಿ ಸಕ್ರೀಯವಾಗಿದ್ದು, ಬಂಟ್ವಾಳದಲ್ಲಿ ಪತ್ರಕರ್ತರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು.













