






ಪುತ್ತೂರು: ಬೆಟ್ಟಂಪಾಡಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ನಡೆಯಲಿರುವ 41ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಹಾಗೂ ಸಮಾಲೋಚನಾ ಸಭೆ ಜು.19ರಂದು ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ಬಿಲ್ವಶ್ರೀ ಸಭಾಂಗಣದಲ್ಲಿ ನಡೆಯಿತು.


ಬೆಟ್ಟಂಪಾಡಿ ಗುತ್ತು ಮನೆಯ ಹಿರಿಯರಾದ ಚಂದ್ರಾವತಿ ರೈರವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭಹಾರೈಸಿದರು. ಬಳಿಕ ಸಮಾಲೋಚನಾ ಸಭೆ ನಡೆಯಿತು. ಆಮಂತ್ರಣ ಪತ್ರ ಮನೆ ಮನೆಗೆ ತಲುಪಿಸುವ ಬಗ್ಗೆ, ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು. ಸದಸ್ಯರು ಸಲಹೆ ಸೂಚನೆ ನೀಡಿದರು.



ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ಬೆಟ್ಟಂಪಾಡಿ ಬೀಡು, ಮೊಕ್ತೇಸರ ವಿನೋದ್ ಕುಮಾರ್ ರೈ ಬೆಟ್ಟಂಪಾಡಿ ಗುತ್ತು, ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರೂ ಆದ ಮನಮೋಹನ ರೈ ಚೆಲ್ಯಡ್ಕ, ಶ್ರೀಗಣೇಶೋತ್ಸವ ಸಮಿತಿ ಅಧ್ಯಕ್ಷ ಮಹೇಶ್ ಕೋರ್ಮಂಡ, ಪ್ರಧಾನ ಕಾರ್ಯದರ್ಶಿ ಉದಯ ಕುಮಾರ್ ಕಕ್ಕೂರು, ಕೋಶಾಧಿಕಾರಿ ಜಗದೀಶ ಗೌಡ ಪಾರ, ಸಂಚಾಲಕ ಡಾ.ಸುಬ್ರಹ್ಮಣ್ಯ ವಾಗ್ಲೆ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.










