ಜು.21: ಭಾರತ್ ಸ್ಕೌಟ್ಸ್, ಗೈಡ್ಸ್, ಸ್ಥಳೀಯ ಸಂಸ್ಥೆಗಳ ಮಹಾಸಭೆ, ಮಾಹಿತಿ ಕಾರ್ಯಾಗಾರ, ಅಭಿನಂದನಾ ಸಭೆ

0

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ತಾಲೂಕು ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆ ಪುತ್ತೂರು ಇದರ ವಾರ್ಷಿಕ ಮಹಾಸಭೆ, ಮಾಹಿತಿ ಕಾರ್ಯಾಗಾರ, ಅಭಿನಂದನಾ ಸಭೆ ಜು. 21ರಂದು ಬೆಳಿಗ್ಗೆ ಗಂಟೆ 9ಕ್ಕೆ ಬೊಳುವಾರಿನ ಸ್ಕೌಟಿಂಗ್ ಸೆಂಟರ್‌ನಲ್ಲಿ ನಡೆಯಲಿದೆ.


ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತ ಡಾ. ಮೋಹನ್ ಆಳ್ವ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಸ್ಥಳೀಯ ಸಂಸ್ಥೆ ಪುತ್ತೂರು ಇದರ ಅಧ್ಯಕ್ಷ ರೇ ವಿಜಯ ಹಾರ್ವಿನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ಸುರೇಶ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಗೈಡ್ಸ್ ಆಯುಕ್ತ ವಿಮಲಾ ರಂಗಯ್ಯ, ಜಿಲ್ಲಾ ಸ್ಕೌಟ್ಸ್ ಆಯುಕ್ತ ಬಿ.ಎಂ.ತಂಬೆ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್‌ರಾಜ್ ಕೆ, ಜಿಲ್ಲಾ ಕಾರ್ಯದರ್ಶಿ ಪ್ರತೀಮ್ ಕುಮಾರ್, ಸ್ಕೌಟಸ್ ಯುವ ಧ್ವನಿ ಆಯುಕ್ತ ಎಂ.ಜಿ.ಕಜೆ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ಟಿ.ಪಿ.ಒ ಸಿಲ್ವಿಯಾ ಕ್ಯಾಸ್ಟಿಲಿನೋ ಅವರು ಗೌರವ ಉಪಸ್ಥಿತಿಯಲ್ಲಿರುತ್ತಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here