ಜು.21: ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾ|ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

0

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ 2026-27ನೇ ಸಾಲಿನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜು.21ರಂದು ಮಧ್ಯಾಹ್ನ 12 ಗಂಟೆಗೆ ನೆಲ್ಲಿಕಟ್ಟೆ ಮಾತೃಛಾಯಾ ಸಭಾಭವನದಲ್ಲಿ ನಡೆಯಲಿದೆ


ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಧಾಕರ ಸುವರ್ಣ ಹಾಗೂ ಪುತ್ತೂರು ಸುದ್ದಿಬಿಡುಗಡೆ ಸಿಇಒ ಸೃಜನ್ ಊರುಬೈಲು ಭಾಗವಹಿಸಲಿದ್ದಾರೆ. ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಸುದೇಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಪತ್ರಕರ್ತರ ಸಂಘದ ಕಾನೂನು ಸಲಹೆಗಾರ, ವಕೀಲರಾದ ಕೃಷ್ಣಪ್ರಸಾದ್ ನಡ್ಸಾರ್ ಹಾಗೂ ಸಂಘದ ಸ್ಥಾಪಕಾಧ್ಯಕ್ಷ ಉಮೇಶ್ ಮಿತ್ತಡ್ಕ ಗೌರವ ಉಪಸ್ಥಿತರಿರಲಿದ್ದಾರೆ.

ಸಾಧಕರಿಗೆ ಸನ್ಮಾನ:
ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತರು, ಪುತ್ತೂರು ಎಸ್‌ಆರ್‌ಕೆ ಲ್ಯಾಡರ್‍ಸ್ ಮಾಲಕ ಕೇಶವ ಅಮೈ ಹಾಗೂ ಪುತ್ತೂರು ಸುದ್ದಿಬಿಡುಗಡೆಯ ಪ್ರಸರಣ ವಿಭಾಗದ ನಿವೃತ್ತ ಮುಖ್ಯಸ್ಥ ಜಯರಾಮ ಭಟ್ ಸಂಪಾಜೆಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here