ವಿಟ್ಲ-ಬೊಳಂತಿಮೊಗರಿಗೆ ಸರಕಾರಿ ಬಸ್‌ಗೆ ಮನವಿ : ಕ್ರಮಕ್ಕೆ ಶಾಸಕ ಅಶೋಕ್ ರೈ ಸೂಚನೆ

0

ಪುತ್ತೂರು: ವಿಟ್ಲದಿಂದ ಮಂಗಿಲಪದವು-ಬೊಳಂತಿಮೊಗರಿಗೆ ಸರಕಾರಿ ಬಸ್ ಸೌಲಭ್ಯ ಕಲ್ಪಿಸುವಂತೆ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಅಬ್ದುಲ್‌ ರಹಿಮಾನ್ ನೆಲ್ಲಿಗುಡ್ಡೆ ಅವರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದ್ದಾರೆ.

ವಿಟ್ಲದಿಂದ ಮಂಗಿಲಪದವು, ಬೊಳಂತಿಮೊಗರು ಮೂಲಕ ಕಂಬಳಬೆಟ್ಟುವಾಗಿ ಬಸ್ ಸೇವೆ ಪ್ರಾರಂಭಿಸುವಂತೆ ಮನವಿಯಲ್ಲಿ ಕೋರಲಾಯಿತು. ಈ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಸಮಯಕ್ಕೆ ಸರಿಯಾಗಿ ತೆರಳಲು ತೊಂದರೆಯಾಗುತ್ತಿದೆ ಎಂದು ಅವರು ತಿಳಿಸಿದರು. ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ ಅವರು, ಈ ಭಾಗದಲ್ಲಿ ಬಸ್ ಸೇವೆ ಆರಂಭಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here