






ಬಡಗನ್ನೂರು: ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಮತ್ತು ಪ್ರಗತಿ ಆಸ್ಪತ್ರೆ ಪುತ್ತೂರು ಇವರ ಸಹಯೋಗದೊಂದಿಗೆ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ಪ್ರಥಮ ಚಿಕಿತ್ಸೆ ಮತ್ತು CPR ಮಾಹಿತಿ ಕಾರ್ಯಾಗಾರವು ಜು.20ರಂದು ನಡೆಯಿತು.


ತರಬೇತಿಯಲ್ಲಿ ಅಪಘಾತ ಅಥವಾ ತುರ್ತು ಪರಿಸ್ಥಿತಿಯಲ್ಲಿ ಗಾಯಗೊಂಡ ವ್ಯಕ್ತಿಗೆ ತಕ್ಷಣ ನೀಡಬೇಕಾದ ಪ್ರಥಮ ಚಿಕಿತ್ಸೆಯ ಬಗ್ಗೆ ವಿವರವಾಗಿ ತಿಳಿಸಲಾಯಿತು. ಬಳಿಕ ಉಸಿರಾಟ ನಿಂತಾಗ CPR ನೀಡುವ ವಿಧಾನ, ಬಾಯಿಯಿಂದ ಬಾಯಿಗೆ ಉಸಿರಾಟ, ಎದೆ ಒತ್ತುವಿಕೆ ಮಾಡುವ ವಿಧಾನಗಳನ್ನು ಪ್ರಾಯೋಗಿಕವಾಗಿ ತೋರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಪ್ಯಾರಾಮೆಡಿಕಲ್ ಸಿಬ್ಬಂದಿ ಕುಮಾರಿ ಶ್ರೇಯ, ಪೇಷಂಟ್ ಕೌನ್ಸಿಲರ್ ಶ್ರೀಮತಿ ಚೈತ್ರ, ಆಂಬುಲೆನ್ಸ್ ಚಾಲಕ ಶ್ರೀ ವೆಂಕಟೇಶ ಉಪಸ್ಥಿತರಿದ್ದು CPR ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ನೀಡಿದರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಿರ್ದೇಶಕ ಗಣರಾಜ ಕುಂಬ್ಳೆ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಸಂಚಾಲಕ ವಿಘ್ನೇಶ್ ಹಿರಣ್ಯ ಉಪಸ್ಥಿತರಿದ್ದರು.ಸಂಸ್ಥೆಯ ಯೋಗ ತರಬೇತಿದಾರ ಅಶೋಕ್ ಅಂಬಟ ಅವರ ಸಹಕಾರದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು. ಪ್ರಾಥಮಿಕ ಶಾಲಾ ಮುಖ್ಯ ಗುರು ರಾಜಗೋಪಾಲ್ ಎನ್ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯ ಗುರು ಸುಮನ ವಂದಿಸಿದರು. ಪ್ರೌಢಶಾಲಾ ಸಹ ಶಿಕ್ಷಕಿ ಭವಿತಾ ಕಾರ್ಯಕ್ರಮ ನಿರೂಪಿಸಿದರು.










